ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ..!!

ಹುತಾತ್ಮ ಕ್ಯಾಪ್ಟನ್ ಪಾರ್ಥಿವ ಶರೀರಕ್ಕೆ ಸಿಎಂ ಸಿದ್ದರಾಮಯ್ಯ ಅಂತಿಮ ನಮನ


ಬೆಂಗಳೂರು : ಹುತಾತ್ಮ ಕ್ಯಾಪ್ಟನ್​ ಪ್ರಾಂಜಲ್​ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ನಮನ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಧನ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

ಶುಕ್ರವಾರ ರಾತ್ರಿ 9.30ರ ಹೊತ್ತಿಗೆ ಹೆಚ್​ಎಎಲ್​ ವಿಮಾನ ನಿಲ್ದಾಣಕ್ಕೆ ಪ್ರಾಂಜಲ್​ ಅವರ ಪಾರ್ಥೀವ ಶರೀರ ಆಗಮಿಸಿದ್ದು, ಈ ವೇಳೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರು ಹುತಾತ್ಮ ಪ್ರಾಂಜಲ್​ ಅವರಿಗೆ ಅಂತಿಮ ಗೌರವ ನಮನ ಸಲ್ಲಿಸಿದರು.

ಆದರೆ ಪ್ರಾಂಜಲ್ ಅವರು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ನಾಗರಿಕರನ್ನು ರಕ್ಷಿಸಿದರು. ಕುಟುಂಬದ ದುಃಖದಲ್ಲಿ ನಾನು ಭಾಗಿಯಾಗುತ್ತೇನೆ. ಹುತಾತ್ಮ ಯೋಧನ ಕುಟುಂಬಕ್ಕೆ ನಮ್ಮ ಸರ್ಕಾರದಿಂದ ಸಾಧ್ಯವಿರುವ ಎಲ್ಲಾ ರೀತಿಯ ನೆರವೂ ಸಿಗಲಿದೆ ಎಂದು ಹೇಳಿದರು..


Comments