ದೊಡ್ಡಬಳ್ಳಾಪುರ: ದಿನಾಂಕ 23ರಿಂದ 26ರ ವರೆಗೆ ಅಸ್ಸಾಂನ ಗುವಾವಾಟಿಯಲ್ಲಿ ನಡೆದ 48ನೇ ರಾಷ್ಟ್ರೀಯ ಯೋಗ ಚಾಂಪಿಯನ್ಶಿಪ್ ನಲ್ಲಿ 14 ರಿಂದ 16 ವರ್ಷದ ಮಹಿಳಾ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದ ಕುಮಾರಿ ಜಾನ್ಹವಿ ಎಂ ಆರ್. ಮತ್ತೊಂದು ರಾಷ್ಟ್ರೀಯ ಸಾಧನೆ ಮಾಡುವ ಮೂಲಕ ದೊಡ್ಡಬಳ್ಳಾಪುರಕ್ಕೆ ಕೀರ್ತಿಯನ್ನು ತಂದುಕೊಟ್ಟಿದ್ದಾರೆ.
ಇದನ್ನೂ ಓದಿ:ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ..!!
ಇದನ್ನೂ ಓದಿ: ಕೈಕೊಟ್ಟ ಮಳೆ, ಬಾರದ ಬೆಳೆ, ಸಾಲದ ಭಯ ರೈತ ನೇಣಿಗೆ ಶರಣು...!
ಇವರಿಗೆ ಕರ್ನಾಟಕ ರಾಜ್ಯ ಅಮೆಚೂರ್ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಜಿಎನ್ ಕೃಷ್ಣಮೂರ್ತಿ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಪ್ರೊಫೆಸರ್ ಎಂಜಿ ಅಮರನಾಥ್, ನಿಸರ್ಗ ಕೇಂದ್ರದ ಅಧ್ಯಕ್ಷರಾದ ಎಚ್ ಸಿ ರವೀಂದ್ರ, ಕಾರ್ಯದರ್ಶಿ ಯೋಗ ನಟರಾಜ್, ಖಜಾಂಚಿ ಶ್ಯಾಮ್ ಸುಂದರ್ ಮತ್ತು ಯೋಗ ಶಿಕ್ಷಕರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಅಭಿನಂದನೆ ಸಲ್ಲಿಸಿದ್ದಾರೆ.
Comments