ಅನುಮಾನ ದಿಂದ ಹೆಂಡತಿಗೆ ಚಾಕು ಇರಿದು ತಾನು ಆತ್ಮಹತ್ಯೆಗೆ ಶರಣಾದ ಗಂಡ....!

 


ಪ್ರೀತಿಸಿ ಮದುವೆಯಾದ ಜೋಡಿಯೊಂದರ ಸಂಸಾರದಲ್ಲಿ ಅನುಮಾನ ಎಂಬ ಭೂತ ಜೀವಗಳನ್ನೇ ಬಲಿಪಡೆದಿದೆ.ಗಂಡ ಹೆಂಡತಿಗೆ ಚಾಕುವಿನಿಂದ ಇರಿದು, ತಾನು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಮುತ್ತಿನ ಮುಳ್ಳುಸೋಗೆ ಗ್ರಾಮದಲ್ಲಿ ನಡೆದಿದೆ.


ಬಿಷಪ್ ಕಾಟನ್ ಕಾಲೇಜಿನಲ್ಲಿ ಕನ್ನಡ ಜನಪದ ಹಬ್ಬ...ಜಾನಪದ ಕಲಾತಂಡಗಳ ಸದ್ದಿಗೆ ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು...!!


ಹೀಗೆ ಹೆಂಡತಿಯ ಮೇಲೆ ಅನುಮಾನದಿಂದ ಆಕೆಗೆ ಚಾಕುವಿನಿಂದ ಇರಿದು ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಪ್ರಸನ್ನ ಎಂದು ಗುರುತಿಸಲಾಗಿದೆ. ಚಾಕು ಇರಿತಕ್ಕೆ ಒಳಗಾದವರು ಶ್ವೇತಾ ಎಂಬುದಾಗಿ ತಿಳಿದು ಬಂದಿದೆ. ಇವರಿಬ್ಬರು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತಿನ ಮುಳ್ಳುಸೋಗೆ ಗ್ರಾಮದವರು. ಇವರು ಒಂದೇ ಗ್ರಾಮದವರಾಗಿದ್ದಾರೆ. ಒಂದೂವರೆ ವರ್ಷದ ಹಿಂದೆ ಪ್ರೀತಿಸಿ ಮದುವೆ ಆಗಿದ್ದರು. ಸ್ವಲ್ಪ ದಿನಗಳ ನಂತರ ಇವರಿಬ್ಬರ ಸಂಸಾರದಲ್ಲಿ ಅನುಮಾನ ಹೆಚ್ಚಾಗಿ, ಸಾಮರಸ್ಯ ಇಲ್ಲದ ಕಾರಣ ಇಬ್ಬರು ಬೇರೆ ಬೇರೆಯಾಗಿ ವಾಸಮಾಡುತ್ತಿದ್ದರು.



ಹೆಂಡತಿ ಶ್ವೇತಾ ಮೇಲೆ ಗಂಡ ಪ್ರಸನ್ನ ಸಂಶಯಪಡಲು ಪ್ರಾರಂಭಿಸಿದ್ದಾರೆ. ಇದರಿಂದ ಇಂದು ಗ್ರಾಮದಲ್ಲೇ ಹೆಂಡತಿಗೆ ಚಾಕುವಿನಿಂದ ಮನ ಬಂದಂತೆ ಇರಿದಿದ್ದಾರೆ. ನಂತರ ಅವರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಂಡತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಡ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಬೈಲಕುಪ್ಪೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Comments