ಇದಕ್ಕಿದಂತೆ ಹೊತ್ತಿ ಉರಿದ ಚಲಿಸುತ್ತಿದ್ದ ಕಾರು, ಪ್ರಾಣಾಪಾಯದಿಂದ ಪಾರಾದ ವಕೀಲರ ಕುಟುಂಬ
ಯಲಹಂಕ : ಚಲಿಸುತ್ತಿದ್ದ ಕಾರು ಇದ್ದಕ್ಕಿದಂತೆ ಹೊತ್ತಿ ಉರಿದಿದೆ, ಕಾರಿನಲ್ಲಿದ್ದ ವಕೀಲರ ಕುಟುಂಬ ಪ್ರಾಣಾಪಾಯದಿಂದ ಪಾರಾಗಿದೆ, ಸ್ಥಳಕ್ಕೆ ಆಗಮಿಸಿದ ಆಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಯಲಹಂಕ ತಾಲೂಕು ಮಾರಸಂದ್ರ ಬಳಿಯ ಅಪಾರ್ಟ್ ಮೆಂಟ್ ಮುಂಭಾಗದಲ್ಲಿ ಇಂದು ರಾತ್ರಿ 7 ಗಂಟೆ ಸಮಯದಲ್ಲಿ ಘಟನೆ ನಡೆದಿದ್ದು, ಗೌರಿಬಿದನೂರು ಕಡೇಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕಾರು ಇದ್ದಕ್ಕಿದಂತೆ ಹೊತ್ತಿ ಉರಿದಿದೆ, ಕಾರಿನ ಮೇಲೆ ಲಾಯರ್ ಸಿಂಬಲ್ ಇದ್ದು, ವಕೀಲರ ಕುಟುಂಬ ಕಾರಿನಲ್ಲಿದ್ದ ಮಾಹಿತಿ ತಿಳಿದು ಬಂದಿದೆ.
ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಮೇಲೆ ಈಗ ಮತ್ತೊಂದು ಆರೋಪ....
ಬೆಂಕಿ ಹೊತ್ತಿಕೊಂಡ ಕೂಡಲೇ ಕಾರಿನಲ್ಲಿದ್ದವರು ಹೊರಗೆ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದು, ಸ್ಥಳಕ್ಕೆ ರಾಜಾನುಕುಂಟೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ, ಕಾರಿನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಬೆಂಕಿಯಿಂದ ಅವಘಡ ಸಂಭಂವಿಸದೆ ಎಂದು ಹೇಳಲಾಗುತ್ತಿದೆ.
ಘಟನೆ ನಂತರ ಯಲಹಂಕ-ಹಿಂದೂಪುರ ರಸ್ತೆಯಲ್ಲಿ ಟ್ರಾಫಿಕ್ ಜ್ಯಾಮ್ ಉಂಟಾಗಿದ್ದು, ವಾಹನಗಳ ಸುಗಮ ಸಂಚಾರಕ್ಕೆ ರಾಜಾನುಕುಂಟೆ ಪೊಲೀಸರು ಅನುವು ಮಾಡಿಕೊಟ್ಟರು.
Comments