ಬೈಕ್‌ಗೆ ಟಿಪ್ಪರ್‌ ಲಾರಿ ಡಿಕ್ಕಿ,ಬೈಕ್ ಸವಾರ ಸ್ಥಳದಲ್ಲೇ ಸಾವು....!!


 ಬೈಕ್‌ಗೆ ಟಿಪ್ಪರ್‌ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ  ಸಾವು. ಬೈಕ್ ಸವಾರ ಅರುಣ್ (28) ಸ್ಥಳದಲ್ಲೆ ಮೃತಪಟ್ಟವರು. ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ಡಿಮಾರ್ಟ್ ಬಳಿ ಈ ಅಪಘಾತ ಸಂಭವಿಸಿದೆ. ಶನಿವಾರ ರಾತ್ರಿ 12 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ.


ಅರುಣ್‌ ಕ್ಯಾಬ್ ಜೆಮಿನಿ ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ರಾತ್ರಿ ಕೆಲಸ ಮುಗಿಸಿ ಮನೆಗೆ ಹೋಗುವಾಗ, ವೇಗವಾಗಿ ಬಂದ ಟಿಪ್ಪರ್ ಲಾರಿಯು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ನಿಯಂತ್ರಣ ತಪ್ಪಿ ಕೆಳಬಿದ್ದ ಅರುಣ್ ಮೇಲೆ ಲಾರಿಯು ಹರಿದಿದೆ. ಪರಿಣಾಮ ಅರುಣ್‌ನ ಸೊಂಟದ ಭಾಗವೆಲ್ಲವೂ ಛಿದ್ರಗೊಂಡಿತ್ತು.


ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸರು ಚೆಲ್ಲಾಪಿಲ್ಲಿಯಾಗಿದ್ದ ಅರುಣ್‌ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದರು. ಪ್ರಕರಣ ಸಂಬಂಧ ಕುಮಾರಸ್ವಾಮಿ ಲೇಔಟ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕನನ್ನು ಬಂಧಿಸಿದ್ದಾರೆ.

Comments