ನಾಮಫಲಕದಲ್ಲಿ ಕಡ್ಡಾಯವಾಗಿ ಶೇ 60 ರಷ್ಟು ಕನ್ನಡಭಾಷೆ ಪ್ರದರ್ಶಿಸಬೇಕು ಜಿಲ್ಲಾಧಿಕಾರಿ - ಡಾ.ಎನ್ ಶಿವಶಂಕರ್- ಸಾರಥಿ ಟಿವಿ ನ್ಯೂಸ್
ಬೆಂಗಳೂರು ಗ್ರಾಮಾಂತರ ಜಿಲ್ಲೆ: "ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022" ನ್ನು ಸಮರ್ಪಕವಾಗಿ ಜಾರಿಗೊಳಿಸುವ ಸಂಬಂಧ ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ(ತಿದ್ದುಪಡಿ) ವಿಧೇಯಕ-2024 ರನ್ವಯ ಕನ್ನಡ ಭಾಷೆಯನ್ನು ಫಲಕಗಳ ಮೇಲ್ಬಾಗದಲ್ಲಿ ಶೇ 60 ರಷ್ಟು ಕಾಣುವಂತೆ ಕಡ್ಡಾಯವಾಗಿ ಅನುಷ್ಠಾನಕ್ಕೆ ತರಲು ಆದೇಶವಾಗಿರುತ್ತದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ರಾಜ್ಯ ಸರ್ಕಾರದ ಇಲಾಖೆಗಳು, ಸ್ವಾಯುತ್ತ ಸಂಸ್ಥೆಗಳು, ಸಹಕಾರ ಮತ್ತು ಸಾರ್ವಜನಿಕ ಉದ್ಯಮಗಳು, ಬ್ಯಾಂಕುಗಳು, ಟ್ರಸ್ಟ್ ಗಳು ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್ ಗಳು ಇತರೆ ಹಣಕಾಸು ಸಂಸ್ಥೆಗಳು, ಖಾಸಗಿ ವಾಣಿಜ್ಯ ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ವಿಶ್ವವಿದ್ಯಾಲಯಗಳ ಫಲಕಗಳಲ್ಲಿ ಸರ್ಕಾರಿ ಆದೇಶದಂತೆ ಕಡ್ಡಾಯವಾಗಿ ಶೇ 60 ರಷ್ಟು ಕನ್ನಡ ಭಾಷೆಯನ್ನು ಪ್ರದರ್ಶಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments