ಗೀತಂ ವಿಶ್ವವಿದ್ಯಾಲಯದ ಬಿ.ಟೆಕ್ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ದೊಡ್ಡಬಳ್ಳಾಪುರ: ಆಂಧ್ರಪ್ರದೇಶದ ಕರ್ನೂಲು ಮೂಲದ ದಾಸರಿ ಬ್ರಹ್ಮಸಾಯಿರೆಡ್ಡಿ ನಿನ್ನೆ ರಾತ್ರಿ ಹಾಸ್ಟೆಲ್ ಮಹಡಿ ಮೇಲಿಂದ ಬಿದ್ದು ಮೃತಪಟ್ಟಿದ್ದಾರೆ. ಆದರೆ, ಗೀತಂ ಆಡಳಿತ ಮಂಡಳಿ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೇ, ಪೊಲೀಸರು ಬರುವವರೆಗೂ ಕಾಯದೇ ಮೃತದೇಹ ತೆರವು ಮಾಡಿರುವುದು ಅನುಮಾನಗಳಿಗೆ ಕಾರಣವಾಗಿದೆ.
ಗೀತಂ ವಿ.ವಿಯಲ್ಲಿ ಈ ಹಿಂದೆ ಕೂಡ ಹಲವು ವಿದ್ಯಾರ್ಥಿಗಳು ನಿಗೂಢವಾಗಿ ಮೃತಪಟ್ಟಿದ್ದರು. ಕಳೆದ ಒಂದೂವರೆ ವರ್ಷದಲ್ಲಿ ವಿದೇಶಿ ಮೂಲದ ವಿದ್ಯಾರ್ಥಿ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದರು. ಇನ್ನೊಬ್ಬ ವಿದ್ಯಾರ್ಥಿ ನೇಣು ಹಾಕಿಕೊಂಡಿದ್ದರು. ಮತ್ತೊಬ್ಬ ವಿದ್ಯಾರ್ಥಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಹೀಗೆ ಸಾಲು ಸಾಲು ವಿದ್ಯಾರ್ಥಿಗಳ ಸಾವು ಮುಂದುವರಿದರೂ ಆಡಳಿತ ಮಂಡಳಿ ಯಾವುದೇ ಕ್ರಮ ಜರುಗಿಸದಿರುವುದು ಯಕ್ಷ ಪ್ರಶ್ನೆಯಾಗಿದೆ
ಸದ್ಯ ಬಿ.ಟೆಕ್ ವಿದ್ಯಾರ್ಥಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ವಿ.ವಿ.ಗೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
Comments