ವಿದ್ಯಾರ್ಥಿಗಳು ಮತ್ತು ವಿದ್ಯಾವಂತರು ಪ್ರಶ್ನೆ ಮಾಡುವವರೆಗೂ ದೇಶ ಸರಿ ಹೋಗುವುದಿಲ್ಲ.... ಶಾಸಕ ಧೀರಜ್ ಮುನಿರಾಜು.....!!
ದೊಡ್ಡಬಳ್ಳಾಪುರ: ತಾಲೂಕಿನ ರಘುನಾಥಪುರ ಗ್ರಾಮದ ಖಾಸಗಿ ಕಲ್ಯಾಣ ಮಂಟಪದಲ್ಲಿ ಇಂದು ಅಂಜನಾದ್ರಿ ಟ್ರಸ್ಟ್ ವತಿಯಿಂದ ಆಯೋಜಿಸಿದ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು..
ಯುವ ಸಮುದಾಯವು ಸರ್ಕಾರ ಹಾಗೂ ಸಮಾಜದ ವ್ಯವಸ್ಥೆಯನ್ನು ಪ್ರಶ್ನಿಸುವ ಮನೋಬವನ್ನು ರೂಡಿಸಿಕೊಳ್ಳಬೇಕು.
CETಯಲ್ಲಿ ಸರ್ಕಾರಿ ಸೀಟುಗಳಿಸಿದ 10 ವಿದ್ಯಾರ್ಥಿಗಳಿಗೆ ವಾರ್ಷಿಕ ಶುಲ್ಕವನ್ನು ಕಟಲಾಗುವುದು ಎಂದು ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು.
ಮುಂಬರುವ ದಿನಗಳಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಸರ್ಕಾರದ 40ಕ್ಕೂ ಹೆಚ್ಚು ಇಲಾಖೆಯಾ ಅಧಿಕಾರಿಗಳ ದೂರವಾಣಿಕ ಸಂಖ್ಯೆ ಸೇರಿದಂತೆ ನಿಮ್ಮ ಅಗತ್ಯದ ಸರ್ಕಾರಿ ಕೆಲಸಗಳಿಗೆ ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸುತ್ತೇವೆ ಎಂದರು.
ಇನ್ನು ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಬಿಜೆಪಿ ಪ್ರಮುಖ ಮುಖಂಡರು ಸೇರಿದಂತೆ ನಗರಸಭಾ ಸದಸ್ಯರು ವಿದ್ಯಾರ್ಥಿಗಳು ಪೋಷಕರು ಉಪಸ್ಥಿತರಿದ್ದರು.
ಮನೋಜ್ ಹನಿಯೂರು ಸಾರಥಿ ಟಿವಿ ನ್ಯೂಸ್ ದೊಡ್ಡಬಳ್ಳಾಪುರ
Comments