ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ರಕ್ಷಾ ರಾಮಯ್ಯ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ | ನಿರಾಸೆಯಲ್ಲಿ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಶಿವಶಂಕರ್ ರೆಡ್ಡಿ...!!

 ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ರಕ್ಷಾ ರಾಮಯ್ಯ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ | ನಿರಾಸೆಯಲ್ಲಿ ಮಾಜಿ ಸಿಎಂ ವೀರಪ್ಪ ಮೊಯ್ಲಿ ಹಾಗೂ ಶಿವಶಂಕರ್ ರೆಡ್ಡಿ...!!



ನವದೆಹಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಸೇರಿ ದಂತೆ 3 ಲೋಕ ಸಭಾ ಕ್ಷೇತ್ರದ ಅಭ್ಯರ್ಥಿಗಳನ್ನು ಕಾಂಗ್ರೆಸ್ ಪಕ್ಷ ಟಿಕೆಟ್ ಘೋಷಣೆ ಮಾಡಿದೆ.



ತೀವ್ರ ಕುತೂಹಲ ಕಗ್ಗಂಟಿನಲ್ಲಿದ್ದಂತಹ  ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ರಕ್ಷಾ ರಾಮಯ್ಯ ಅವರ ಹೆಸರನ್ನು ಘೋಷಣೆ ಮಾಡಿದೆ. ಹಾಗೆ ಬಳ್ಳಾರಿಯಲ್ಲಿ ಎಸ್ಸಿ ಮೀಸಲು ಕ್ಷೇತ್ರ ತಿಂದ ಈ ತುಕಾರಾಂ, ಚಾಮರಾಜನಗರ ಎಸ್ಸಿ ಮೀಸಲು ಕ್ಷೇತ್ರದಿಂದ ಸುನಿಲ್ ಬೋಸ್ ಹೆಸರನ್ನ ಅಂತಿಮ ಪಟ್ಟಿಯಲ್ಲಿ ಪ್ರಕಟಿಸಿದೆ.


ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಪ್ರಬಲ ಟಿಕೆಟ್ ಆಕಾಂಕ್ಷಿಗಳಾಗಿ ಮೂರು ಜನ ಇದ್ರು, 3 ಜನರು ಕೂಡ ತೀವ್ರ ಪೈಪೋಟಿಯನ್ನು ನಡೆಸಿದ್ದರು. ಅಂತಿಮ ಕ್ಷಣದವರೆಗೂ ಯಾರಿಗೆ ಟಿಕೆಟ್ ಸಿಗುತ್ತೆ ಎಂಬ ಕುತೂಹಲವನ್ನು ಕೆರಳಿಸಿದಂತಹ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಈಗ ರಕ್ಷಾ ರಾಮಯ್ಯ ರವರ ಹೆಸರನ್ನು ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದೆ.

Comments