ರಾಜಘಟ್ಟದ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅಧಿಕೃತವಾಗಿ ಚುನಾವಣಾ ಪ್ರಚಾರ ಆರಂಭಿಸಿದ ಡಾ.ಕೆ.ಸುಧಾಕರ್: ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಾಥ್...!!

 


ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಸೊಮವಾರ ರಾಜಘಟ್ಟದ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅಧಿಕೃತವಾಗಿ ಚುನಾವಣಾ ಪ್ರಚಾರ ಆರಂಭಿಸಿದರು.


ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರೊಂದಿಗೆ ದೇವಾಲಯಕ್ಕೆ ಆಗಮಿಸಿದ ಸುಧಾಕರ್ ಅವರು, ಬಿಜೆಪಿ-ಜೆಡಿಎಸ್ ಮುಖಂಡರ ಜೊತೆಗೂಡಿ ಪೂಜೆ ಸಲ್ಲಿಸಿದರು.



ಬಳಿಕ ಮಾತನಾಡಿದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು, ನರೇಂದ್ರ ಮೋದಿ ಅವರನ್ನ ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಈ ನಿಟ್ಟಿನಲ್ಲಿ ಎರಡು ಪಕ್ಷದ ನಾಯಕರು, ಮುಖಂಡರು, ಕಾರ್ಯಕರ್ತರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.


ಜೆಡಿಎಸ್ ಪಕ್ಷವು ಮೊದಲಿನಿಂದಲೂ ಕಾಂಗ್ರೆಸ್ ಪಕ್ಷವನ್ನ ವಿರೋಧಿಸುತ್ತಲೇ ಬಂದಿದೆ. ಡಾ.ಕೆ.ಸುಧಾಕರ್ ಅವರು ಆರೋಗ್ಯ ಸಚಿವರಾಗಿ ಉತ್ತಮ ಕಾರ್ಯನಿರ್ವಹಿಸಿದ್ದಾರೆ. ಈ ಬಾರಿ ಎಂಪಿ‌‌ ಚುನಾವಣೆಯಲ್ಲಿ ಹೆಚ್ಚು ಬಹುಮತ ಪಡೆದು ಜಯಗಳಿಸಲಿದ್ದಾರೆ ಎಂದರು.



ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರು, ಮಾಜಿ ಸಿಎಂ ಕುಮಾರಸ್ವಾಮಿ ಅವರ ಅಭಿಮಾನಿಗಳು ಹೆಚ್ಚಾಗಿದ್ದಾರೆ. ಜೆಡಿಎಸ್ ಪಕ್ಷದ ಎಲ್ಲಾ  ಮುಖಂಡರು, ಕಾರ್ಯಕರ್ತರು ಸುಧಾಕರ್ ಅವರ ಬೆಂಬಲಕ್ಕೆ ನಿಲ್ಲುತ್ತಾರೆ ಎಂದರು.

Comments