IPL 2024: ಬ್ಲಾಕ್ ಟಿಕೆಟ್ ಮಾರಾಟ ಜಾಲ ಭೇದಿಸಿದ ಚೆನ್ನೈ ಪೊಲೀಸರು; 12 ಮಂದಿ ಸೆರೆ
IPL 2024: ಮಂಗಳವಾರ ನಡೆದ ಚೆನ್ನೈ(CSK)) ಮತ್ತು ಲಕ್ನೋ(LSG) ನಡುವಿನ ಪಂದ್ಯದ ಟಿಕೆಟ್‌ಗಳನ್ನು ದುಬಾರಿ ಬೆಲೆಗೆ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ 12 ಮಂದಿಯನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ.
ಚೆನ್ನೈ: ಸದ್ಯ ಸಾಗುತ್ತಿರುವ ಐಪಿಎಲ್‌ನಲ್ಲಿ ಬ್ಲಾಕ್ ಟಿಕೆಟ್ ಮಾರಾಟ ಜಾಲವೊಂದನ್ನು ಭೇದಿಸಿರುವ ತಮಿಳುನಾಡು ಪೊಲೀಸರು 12 ಮಂದಿಯನ್ನು ಸೆರೆ ಹಿಡಿದಿದ್ದಾರೆ. ಮಂಗಳವಾರ ನಡೆದ ಚೆನ್ನೈ(CSK) ಮತ್ತು ಲಕ್ನೋ (LSG) ನಡುವಿನ ಪಂದ್ಯದ ಟಿಕೆಟ್‌ಗಳನ್ನು ದುಬಾರಿ ಬೆಲೆಗೆ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ವೇಳೆ ಇವರನ್ನು ಬಂಧಿಸಲಾಗಿದೆ. ಬಂಧಿತರಿಂದ 1,40,396 ರೂಪಾಯಿ ಮೌಲ್ಯದ 56 ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜತೆಗೆ 12 ಮಂದಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚೆನ್ನೈ ತಂಡ 2 ಪಂದ್ಯಗಳ ಬಳಿಕ ತವರಿನಲ್ಲಿ ಆಡಲಿಳಿದಿತ್ತು. ಹೀಗಾಗಿ ಪಂದ್ಯಕ್ಕೆ ಹೆಚ್ಚುವರಿ ಪ್ರೇಕ್ಷಕರನ್ನು ನಿರೀಕ್ಷಿಸಲಾಗಿತ್ತು. ಇದೇ ಕಾರಣದಿಂದ 12 ಮಂದಿ ಕಾಳಸಂತೆಯಲ್ಲಿ ಟಿಕೆಟ್‌ಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡಲು ಯೋಜನೆ ಹಾಕಿಕೊಂಡಿದ್ದರು. ಸೂಕ್ತ ಮಾಹಿತಿಯೊಂದಿಗೆ ಬಲೆ ಬೀಸಿದ ಚೆನ್ನೈ ಪೊಲೀಸ್ ಕಮಿಷನರ್ ಸಂದೀಪ್ ರೈ ರಾಥೋಡ್ ಅವರು ಸಿವಿಲ್ ಡ್ರೆಸ್ನಲ್ಲಿ ಮೈದಾನದ ಸುತ್ತಮುತ್ತ ಕಣ್ಗಾವಲು ಮತ್ತು ಮೇಲ್ವಿಚಾರಣೆಯಲ್ಲಿ ತೊಡಗಿದ್ದರು. ಈ ವೇಳೆ ಆಂಧ್ರಪ್ರದೇಶದ ಟಿ.ಏಳುಮಲೈ, ಹಯಾತ್ ಬಾಷಾ ನೂರ್ ಮೊಹಮ್ಮದ್, ಎಸ್ .ಶ್ಯಾಮ್ , ಎಸ್ .ಕಿಶೋರ್ ಸೇರಿ ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
Comments