ರಾಗಿ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ 2 ಲೋಡ್‌ನಷ್ಟು ರಾಗಿ ಹುಲ್ಲು ಸುಟ್ಟು ಭಸ್ಮ
ದೊಡ್ಡಬಳ್ಳಾಪುರ: ರಾಗಿ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ 2 ಲೋಡ್‌ನಷ್ಟು ರಾಗಿ ಹುಲ್ಲು ಸುಟ್ಟು ಭಸ್ಮವಾಗಿರುವ ಘಟನೆ ಹೋಬಳಿಯ ಕೊಂಡಸಂದ್ರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರಾಮಚಂದ್ರಪ್ಪ ಎಂಬುವರ ರಾಗಿ ಹುಲ್ಲಿನ ಬಣವೆಗೆ ಶನಿವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಬೆಂಕಿ ತಗುಲಿದೆ. ಬೆಂಕಿಯನ್ನು ನಂದಿಸಲು ಸ್ಥಳೀಯರು ಹರಸಾಹಸ ಪಟ್ಟರು.
ನಂತರ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಲಾಯಿತು, ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಷ್ಟರಲ್ಲಿ ರಾಗಿ ಬಣವೆ ಸುಟ್ಟು ಭಸ್ಮವಾಗಿದೆ. ಇದರಿಂದ ಸುಮಾರು 1 ಲಕ್ಷ ಮೌಲ್ಯದ ರಾಗಿ ಹುಲ್ಲು ಬೆಂಕಿಗಾಹುತಿಯಾಗಿ ನಷ್ಟ ಸಂಭವಿಸಿದೆ.
ಈ ಘಟನೆಗೆ ಕಾರಣ ತಿಳಿದುಬಂದಿಲ್ಲ. ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Comments