ಕಂಟೈನರ್ ತುಂಬಿಕೊಂಡು ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ,ಡಿಕ್ಕಿ ರಭಸಕ್ಕೆ ಎರಡು ವಿದ್ಯುತ್ ಕಂಬಗಳಿಗೆ ಹಾನಿ...

 ಕಂಟೈನರ್ ತುಂಬಿಕೊಂಡು ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಚಾಲಕ: ಡಿಕ್ಕಿ ರಭಸಕ್ಕೆ ಎರಡು ವಿದ್ಯುತ್ ಕಂಬಗಳಿಗೆ ಹಾನಿ

ದೊಡ್ದಬಳ್ಳಾಪುರ:ಬೆಂಗಳೂರು ಕಡೆಯಿಂದ ಕಂಟೈನರ್ ತುಂಬಿಕೊಂಡು ಬರುತ್ತಿದ್ದ ಲಾರಿ ಸಿದ್ದೇನಾಯಕನಹಳ್ಳಿ ಬಳಿ ಹಾದುಹೋಗಿರುವ ಹೆದ್ದಾರಿಯಲ್ಲಿನ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಅಳವಡಿಸಿದ್ದ ತಡೆಗೋಡೆ ಮುರಿದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.


ಘಟನೆಯಲ್ಲಿ ವಿದ್ಯುತ್ ತಂತಿ ತಗುಲಿ ಆಗಬಹುದಾಗಿದ್ದ ತೊಂದರೆಯಿಂದ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಡಿಕ್ಕಿ ರಭಸಕ್ಕೆ ಎರಡು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ.


ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Comments