ಗಣೇಶೋತ್ಸವದಲ್ಲಿ ಹಾಡು ಹಾಕಿ ಡ್ಯಾನ್ಸ್ ಮಾಡುತ್ತಿದ್ದ ಮಗ; ತಾಯಿ ಬಂದು ಮನೆಗೆ ಬಾ ಎಂದಿದ್ದಕ್ಕೆ ಯುವಕ ಆತ್ಮಹತ್ಯೆ...
ಚಿಕ್ಕಬಳ್ಳಾಪುರ: ಗಣೇಶ ಪ್ರತಿಷ್ಠಾಪನೆ ಜಾಗದಲ್ಲಿ ಹಾಡುಗಳಿಗೆ ಡ್ಯಾನ್ಸ್ ಮಾಡಿಕೊಂಡು ಸಂಭ್ರಮದಲ್ಲಿ ತೇಲಾಡುತ್ತಿದ್ದ ಯುವಕನಿಗೆ ಸಹೋದರ ಹಾಗೂ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ನೊಂದು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಚಿಕ್ಕಪ್ಯಾಯಲಗುರ್ಕಿ ಗ್ರಾಮದಲ್ಲಿ ನಡೆದಿದೆ.
ಗಿರೀಶ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಗಣೇಶೋತ್ಸವದಲ್ಲಿ ಹಾಡು ಹಾಕಿ ಡ್ಯಾನ್ಸ್ ಮಾಡುತ್ತಿದ್ದು, ರಾತ್ರಿ 11 ಗಂಟೆಯಾದರೂ ಮನೆಗೆ ಬಂದಿರಲಿಲ್ಲ. ಇದರಿಂದ ಆತನ ಸಹೋದರ ಹಾಗೂ ತಾಯಿ ಬಂದು ಮನೆಗೆ ಬಾ ಎಂದು ಬೈದು ಬುದ್ಧಿವಾದ ಹೇಳಿದ್ದಾರೆ. ಈ ಮಾತುಗಳಿಂದ ನೊಂದ ಗಿರೀಶ್ ಗ್ರಾಮದ ಹೊರವಲಯದ ಮುತ್ತುರಾಯಸ್ವಾಮಿ ದೇವಾಲಯದ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಬೆಳಗ್ಗೆ ಹೊಲದ ಕಡೆ ಹೋದ ಗ್ರಾಮಸ್ಥರು ಮರದಲ್ಲಿ ನೇತಾಡುತ್ತಿದ್ದ ಯುವಕನ ಶವ ಕಂಡು ಗ್ರಾಮಸ್ಥರಿಗೆ ವಿಷಯ ಮುಟ್ಟಿಸಿದ್ದಾರೆ. ಪೇರೇಸಂದ್ರ ಪೊಲೀಸ್ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Comments