ಶಾಲೆಗೆ ಹೋಗ್ತಿದ ಬಾಲಕಿ ಪ್ರೀಯಕರನೊಂದಿಗೆ ಶಾಲಾ ಸಮವಸ್ತ್ರದಲ್ಲೇ ನೇಣಿಗೆ ಶರಣು....

 ಶಾಲೆಗೆ ಹೋಗ್ತಿದ ಬಾಲಕಿ ಪ್ರೀಯಕರನೊಂದಿಗೆ ಶಾಲಾ ಸಮವಸ್ತ್ರದಲ್ಲೇ ನೇಣಿಗೆ ಶರಣು....









ಶಿಡ್ಲಘಟ್ಟ :ಶಾಲಾ ಸಮವಸ್ತ್ರದಲ್ಲೇ ಅಪ್ರಾಪ್ತ ಬಾಲಕಿ ತನ್ನ ಪ್ರೀಯಕರನೊಂದಿಗೆ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿಡ್ಲಘಟ್ಟ ತಾಲೂಕಿನ ಬೀರಪ್ಪನಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಮೃತರನ್ನು ಚಿಂತಾಮಣಿ ತಾಲೂಕಿನ ಸೀತರಾಮಪುರ ಗ್ರಾಮದ ವಂದನಾ (16), ನವೀನ್ (22) ಮೃತ ಪ್ರೇಮಿಗಳು ಎಂದು ಮೂಲಗಳಿಂದ ತಿಳಿದು ಬಂದಿದೆ.

ನವೀನ್ ಡ್ರೈವರ್ ಕೆಲಸವನ್ನು ಮಾಡುತ್ತಿದ್ದು, ತಮ್ಮದೇ ಸಮುದಾಯದ ವಂದನಾಳನ್ನು ಪ್ರೀತಿ ಮಾಡುತ್ತಿದ್ದನು. ಈ ವಿಚಾರ ಪೋಷಕರ ಗಮನಕ್ಕೆ ಬಂದು ಮಾರ್ಚ್ 30 ರಂದು ತಾಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಬಾಲಕಿಯ ಪೋಷಕರು ದೂರು ದಾಖಲಿಸಿದ್ದರು. ದೂರಿನ ಮೇರೆಗೆ ಪೊಲೀಸರು ಪೋಕ್ಸೋ ಕೇಸ್ ಅಡಿ ದೂರು ದಾಖಲಿಸಿಕೊಂಡು ಬಾಲಕಿಯನ್ನು ಸಾಂತ್ವಾನ ಕೇಂದ್ರಕ್ಕೆ ರವಾನಿಸಿದ್ದರು.

ಇನ್ನೂ ಕಳೆದ ದಿನವಷ್ಟೇ ಇಬ್ಬರು ಒಂದು ಕಡೆ ಸೇರಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧಾರ ಮಾಡಲಾಗಿದ್ದು, ಅದರಂತೆ, ಶಿಡ್ಲಘಟ್ಟ ತಾಲೂಕಿನ ಬೀರಪ್ಪನಹಳ್ಳಿ ಗ್ರಾಮದ ಅರಣ್ಯ ಪ್ರದೇಶಕ್ಕೆ ಹೋಗಿ ಕಳೆದ ಸೆ.13 ರ ಸಂಜೆ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಶಿಡ್ಲಘಟ್ಟ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹಗಳನ್ನು ನಗರದ ಸಾರ್ವಜನಿಕ ಶವಗಾರಕ್ಕೆ ರವಾನಿಸಿದ್ದಾರೆ.

ಸದ್ಯ ಶಿಡ್ಲಘಟ್ಟ ಗ್ರಾಮಾಂತರ ಠಾಣೆಗೆ ಬಾಲಕಿ ಹಾಗೂ ಯುವಕನ ಪೋಷಕರು ಭೇಟಿ ನೀಡಿ ಪ್ರಕರಣವನ್ನು ದಾಖಲಿಸಿದ್ದಾರೆ.

Comments