40 ದಲಿತ ಕುಟುಂಬಗಳಿಗೆ ಮನೆಯಿಲ್ಲ;ದಲಿತ ಕುಟುಂಬಗಳಿಗೆ ಮೂಲಭೂತ ಸೌಕರ್ಯ ಒತ್ತಾಯಿಸಿ ಪ್ರತಿಭಟನೆ.....

 40 ದಲಿತ ಕುಟುಂಬಗಳಿಗೆ ಮನೆಯಿಲ್ಲ;ದಲಿತ ಕುಟುಂಬಗಳಿಗೆ ಮೂಲಭೂತ ಸೌಕರ್ಯ ಒತ್ತಾಯಿಸಿ ಪ್ರತಿಭಟನೆ.....




ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಬಾಗಿಲಲ್ಲಿ ಕುಳಿತ ಅರಹಳ್ಳಿ ಗುಡ್ಡದಹಳ್ಳಿ ಗ್ರಾಮಸ್ಥರಿಂದ ಪ್ರತಿಭಟನೆ.


ದಲಿತ ಕುಟುಂಬಗಳಿಗೆ ಮೂಲಭೂತ ಸೌಕರ್ಯ ಒದಗಿಸುವಂತೆ ಒತ್ತಾಯಿಸಿ ಪಟ್ಟಣ ಪಂಚಾಯತಿ ಮುಂದೆ ಧರಣಿ ಕುಳಿತು ಆಕ್ರೋಶ ವ್ಯಕ್ತಪಡಿಸಿದರು 



ಸುಮಾರು 30-40 ವರ್ಷಗಳಿಂದ ಅರಹಳ್ಳಿ ಗುಡ್ಡದಹಳ್ಳಿಯಲ್ಲಿ ವಾಸ ಮಾಡುತ್ತಿರುವ 40 ದಲಿತ ಕುಟುಂಬಗಳಿಗೆ ಮನೆಯಿಲ್ಲ. ಸರ್ವೆ ನಂ. 86 ರಲ್ಲಿ ನಿವೇಶನ ನೀಡುವಂತೆ ಒತ್ತಾಯಿಸಿದ ಪ್ರತಿಭಟನೆ ನಡೆಸಿದರು.


ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಗ್ರಾಮದಲ್ಲಿ ಮಾಡಿ ಸಮಸ್ಯೆ ಬಗೆ ಹರಿಸುವಂತೆ ಡಿಸಿಗೆ ಮನವಿ ಸಲ್ಲಿಸಿದರು.


ಪ್ರತಿಭಟನೆಗೆ ದಲಿತ ಸಂಘಟನೆಗಳ ಬೆಂಬಲ ನೀಡಿದರು , ನಿವೇಶನ ನೀಡದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ.

Comments