ಯುವಕನ ಕಾಟಕ್ಕೆ ಬೇಸತ್ತ ಯುವತಿಯೊಬ್ಬಳು ಕಾಲೇಜು ಕಟ್ಟದ ಮೇಲಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಬೆಂಗಳೂರು: ಕಾಲೇಜು ಕಟ್ಟಡದ ಮೇಲಿಂದ ಜಿಗಿದು ವಿದ್ಯಾರ್ಥಿನಿ (Self Harming) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಟ್ಟಡ ಮೇಲಿಂದ ಬಿದ್ದು ತೀವ್ರ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತಪಟ್ಟಿದ್ದಾಳೆ.
ಚಿತ್ರದುರ್ಗ ನಗರದ ಚಿತ್ರಾ ಡಾನ್ ಬೋಸ್ಕೋ ಕಾಲೇಜಲ್ಲಿ ಪ್ರಥಮ ಬಿಎಸ್ಸಿ ಓದುತ್ತಿದ್ದ ಪ್ರೇಮಾ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟವಳು.
ಚಿತ್ರದುರ್ಗದ ಮೆದೆಹಳ್ಳಿ ನಿವಾಸಿ ಆಗಿದ್ದ ಪ್ರೇಮಾ, ಶುಕ್ರವಾರ ಬೆಳಗ್ಗೆ ಕಾಲೇಜಿಗೆ ಬಂದು ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸ್ಥಳಕ್ಕೆ ಬಡಾವಣೆ ಪೊಲೀಸ್ ಠಾಣೆ ಪಿಎಸ್‌ಐ ರಘು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಪ್ರೇಮಾಳಿಗೆ ಯುವಕನೊಬ್ಬ ಕಿರುಕುಳ ನೀಡುತ್ತಿದ್ದ ಎನನ್ಲಾಗಿದೆ. ತರುಣ್ ಎಂಬಾತ ಪ್ರೀತಿ ಮಾಡುವಂತೆ ಪ್ರೇಮಾಳಿಗೆ ಪೀಡುಸುತ್ತಿದ್ದ ಎನ್ನಲಾಗಿದೆ. ವಾಟ್ಸ್ ಆ್ಯಪ್‌ನಲ್ಲಿ ನಿತ್ಯವೂ ಚಾಟಿಂಗ್ ಮಾಡಿ ಕಿರಿಕಿರಿ ಮಾಡುತ್ತಿದ್ದ. ಆತ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ. ತರುಣ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದರು.
Comments