ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಮಟ್ಟದ ಒಕ್ಕೂಟದ ಪದಾಧಿಕಾರಿಗಳ ಸಮಾವೇಶ.....
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರೊ ರವಿಕಿರಣ್ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅನೇಕ ಕಾರ್ಯಕ್ರಮಗಳನ್ನು ಸದುಪಯೋಗ ಪಡಿಸಿಕೊಂಡು ಮಾದರಿ ಕುಟುಂಬವನ್ನಾಗಿಸಿಕೊಳ್ಳಬಹುದು. ಯೋಜನೆಯ ಉತ್ತಮ ಮಾರ್ಗದರ್ಶನದೊಂದಿಗೆ ಪ್ರತಿಯೊಬ್ಬ ಸದಸ್ಯ ಆರ್ಥಿಕವಾಗಿ ಸಫಲರಾಗಬಹುದು ಎಂದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹತ್ತು ಹಲವಾರು ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ಹಲವು ಹಳ್ಳಿಗಳಲ್ಲಿ ಸೇವೆ ಸಲ್ಲಿಸುತ್ತಿದೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಪಾತ್ರ ಶ್ಲಾಘನೀಯ ಎಂದು ಹಾರೈಸಿದರು.
ಕ್ಷೇತ್ರದಿಂದ ಬರುವ ಅನುದಾನವನ್ನು ಒಕ್ಕೂಟದ ಮೂಲಕ ಸಧಸ್ಯರಿಗೆ ಒದಗಿಸಲು ಒಕ್ಕೂಟದ ಪದಾಧಿಕಾರಿಗಳ ಪಾತ್ರ ಮುಖ್ಯ ಎಂದು ತಿಳಿಸಿದರು.
ಒಕ್ಕೂಟದ ಪದಾಧಿಕಾರಿಗಳ ಜವಾಬ್ದಾರಿ ,ನಾಯಕತ್ವ ಗುಣ, ಸಹಕಾರ ಮನೋಭಾವನೆ ಬಗ್ಗೆ ಜಿಲ್ಲಾ ನಿರ್ದೇಶಕರಾದ ಉಮರಬ್ಬ ತರಬೇತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು H.S ನಾಗೇಶ್(ಕನ್ನಡ ಛಾಯಾಗ್ರಾಹಕ ಸಂಘದ ಅಧ್ಯಕ್ಷರು)ವಹಿಸಿದ್ದರು.
ಕಾರ್ಯಕ್ರಮದಲ್ಲಿ ಬ್ಯಾಂಕ್ ಆಫ್ ಬರೋಡ ಸಹಾಯಕ ಪ್ರಭಂಧಕರಾದ ಮಧುಸೂದನ್, ತಾಲೂಕು ಯೋಜನಾಧಿಕಾರಿ ಸುಧಾ ಬಾಸ್ಕರ್, ಕಾರ್ಯಕ್ರಮದಲ್ಲಿ ಮೇಲ್ವಿಚಾರಕರು, ಕೃಷಿ ಮೇಲ್ವಿಚಾರಕರು, ತಾಲೂಕಿನ 9 ವಲಯದ ಒಕ್ಕೂಟದ ಪದಾಧಿಕಾರಿಗಳು, ಸೇವಾಪ್ರತಿನಿಧಿಗಳು ,CSC ಸೇವಾದಾರರು, ಕಛೇರಿ ಸಿಬ್ಬಂದಿಗಳು ಹಾಜರಿದ್ದರು.
Comments