ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಯನ್ನು ಸ್ಥಳಾಂತರ ಮಾಡುವಂತೆ ಒತ್ತಾಯಿಸಿ ರೈತರಿಂದ ಜಿಲ್ಲಾಧಿಕಾರಿ ಕಚೇರಿ ಸುತ್ತ ಉರುಳುಸೇವೆ....!!

 ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಯನ್ನು ಸ್ಥಳಾಂತರ ಮಾಡುವಂತೆ ಒತ್ತಾಯಿಸಿ ರೈತರಿಂದ ಜಿಲ್ಲಾಧಿಕಾರಿ ಕಚೇರಿ ಸುತ್ತ ಉರುಳುಸೇವೆ....!!


ದೇವನಹಳ್ಳಿ:ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಯನ್ನು ಸ್ಥಳಾಂತರ ಮಾಡುವಂತೆ ಒತ್ತಾಯಿಸಿ ಅರ್ಕಾವತಿ ನದಿ ಹೋರಾಟ ಸಮಿತಿ ಮತ್ತು ರೈತರಿಂದ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರದ ಬಳಿ ಇರುವ ಜಿಲ್ಲಾಧಿಕಾರಿ ಕಚೇರಿ ಸುತ್ತ ಉರುಳು ಸೇವೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.




ಬೆಂಗಳೂರಿನ ಪೀಣ್ಯದಲ್ಲಿರುವ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಯನ್ನು ಕೂಡಲೆ ದೊಡ್ಡಬಳ್ಳಾಪುರಕ್ಕೆ ವರ್ಗಾವಣೆ ಮಾಡಬೇಕು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಲಿನ್ಯದ ಬಗ್ಗೆ ದೂರು ನೀಡಲು ನಾವು ಯಾವಾಗಲೂ ಬೆಂಗಳೂರಿಗೆ ತೆರಳಬೇಕು ಅಲ್ಲದೆ ಈ ಭಾಗದ ಸಾಕಷ್ಟು ಕಾರ್ಖಾನೆಗಳ ತ್ಯಾಜ್ಯ ‌ನೀರನ್ನು ಕೆರೆಗಳಿಗೆ ಹರಿಸಿ ಅಂತರ್ಜಲ ಹಾಳಾಗುತ್ತಿದೆ ಇದರಿಂದ ಈ ಭಾಗದ ಜನತೆಗೆ ಕುಡಿಯಲು ಸಹ ಯೋಗ್ಯವಾದ ನೀರು ದೊರೆಯುತ್ತಿಲ್ಲ ಎಂದು ರೈತರು ಆಗ್ರಹಿಸಿದರು.




ದೊಡ್ಡಬಳ್ಳಾಪುರದಲ್ಲಿ ಕಾರ್ಯ ನಿರ್ವಹಿಸಬೇಕಾದ ಮಾಲಿನ್ಯ ನಿಯಂತ್ರಣ ಮಂಡಳಿ ಬೆಂಗಳೂರಿನಲ್ಲಿದೆ ಹಲವಾರು ಬಾರಿ ಮನವಿ ಪತ್ರಗಳನ್ನು ನೀಡಿದರು ವರ್ಗಾವಣೆಗೆ ಕ್ರಮ ವಹಿಸಿಲ್ಲ ಇದರಿಂದ ಇಂದು ಡಿಸಿ ಕಚೇರಿ ಮುಂದೆ ಉರುಳು ಸೇವೆ ಮಾಡುವ ಮೂಲಕ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ 



Comments