ಲಾರಿ ಹಾಗೂ ಕಾರಿನ ನಡುವೆ ಅಪಘಾತ;ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ಜಖಂ...!!

ಲಾರಿ ಹಾಗೂ ಕಾರಿನ ನಡುವೆ ಅಪಘಾತ;ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ಜಖಂ...!!



ದೊಡ್ಡಬಳ್ಳಾಪುರ:ಗೂಡ್ಸ್ ಲಾರಿ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿರುವ ಘಟನೆ ಇಂದು ಸಂಜೆ ಸುಮಾರು 7:20ರಲ್ಲಿ ತಾಲೂಕಿನ ಹೊರವಲಯದ ನಾಗದೇನಹಳ್ಳಿ ಬಳಿ ನಡೆದಿದೆ.


ಅತಿವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ.


ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.


ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.....

Comments