ನಿಯಮ ಉಲ್ಲಂಘನೆ ವಿಚಾರ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಈ ಆದೇಶ..
ಸರ್ಕಾರಿ ಕಚೇರಿ ಮತ್ತು ಕಚೇರಿ ಆವರಣದಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರ, ನಿಯಮ ಉಲ್ಲಂಘಿಸಿ ತಂಬಾಕು ಉತ್ಪನ್ನ ಸೇವಿಸುವ ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ.
ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು 2021ರ ನಿಯಮ 31ರ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ, ಮಾದಕ ವಸ್ತುಗಳು, ತಂಬಾಕು ಉತ್ಪನ್ನಗಳ ಸೇವನೆ ನಿಷೇಧಿ ಸಲಾಗಿದೆ. ಆದರೆ, ಅದನ್ನು ಉಲ್ಲಂಘಿಸಿ ಸರ್ಕಾರಿ ಕಚೇರಿ ಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆಯನ್ನು ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ.
ಹೀಗಾಗಿ ನೌಕರರ ಆರೋಗ್ಯದ ದೃಷ್ಟಿಯಿಂದ ಹಾಗೂ ಪರೋಕ್ಷ ಧೂಮಪಾನ ದಿಂದ ಸಾರ್ವಜನಿಕರ ಮತ್ತು ನೌಕರರ ಆರೋಗ್ಯ ಕಾಪಾಡಲು ಯಾವುದೇ ಸರ್ಕಾರಿ ನೌಕರರು ಸರ್ಕಾರಿ ಕಚೇರಿ ಮತ್ತು ಆವರಣದಲ್ಲಿ ತಂಬಾಕು ಉತ್ಪನ್ನಗಳನ್ನು ಸೇವಿಸಬಾರದು.
ಈ ಆದೇಶ ಉಲ್ಲಂಘಿಸಿದ ನೌಕರರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶಿಸಿದೆ.
Comments