ಬಿಪಿಎಲ್ ಕಾರ್ಡ್ ವಿಚಾರವಾಗಿ ಸಮಸ್ಯೆಯಾದಲ್ಲಿ ವಾರದೊಳಗೆ ಪರಿಹಾರ -ಕೆ.ಎಚ್.ಮುನಿಯಪ್ಪ
ಒಂದು ವೇಳೆ ಬಿಪಿಎಲ್ ಕಾರ್ಡ್ ವಿಚಾರದಲ್ಲಿ ಬಡವರಿಗೆ ತೊಂದರೆಯಾದಲ್ಲಿ ತಹಶೀಲ್ದಾರ್ ಗಮನಕ್ಕೆ ತಂದರೆ ಒಂದು ವಾರದೊಳಗಾಗಿ ಸಮಸ್ಯೆ ಬಗೆಹರಿಸಲಾಗುವುದು.
ಅರ್ಹರಿಗೆ ಬಿಪಿಎಲ್ ತಪ್ಪಿ ಹೋಗಬಾರದು. ಆಕಸ್ಮಾತ್ ತಪ್ಪಿ ಹೋಗಿದ್ದರೆ ವಾಪಸ್ ಕೊಡಲಾಗುವುದು.
ಹಾಗೆಯೇ ಪಡಿತರ ಚೀಟಿ ಇಲ್ಲವೆಂದು ಆರೋಗ್ಯ ಸೌಲಭ್ಯ ವಿಚಾರದಲ್ಲಿ ಯಾವುದೇ ತೊಂದರೆ ಆಗುವುದಿಲ್ಲ ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ತಿಳಿಸಿದ್ದಾರೆ.
Comments