ವಿಎಒ (ಗ್ರಾಮ ಆಡಳಿತ ಅಧಿಕಾರಿ) ಹುದ್ದೆ ಪರೀಕ್ಷಾ ಫಲಿತಾಂಶ ಪ್ರಕಟ
ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅ.27ರಂದು ನಡೆಸಲಾಗಿದ್ದ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬುಧವಾರ ಪ್ರಕಟಿಸಿದೆ.
ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ನ.28ರಂದು ಸಂಜೆ 4ರ ಒಳಗೆ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಲಿಂಕ್ ಮೂಲಕ ಸಲ್ಲಿಸಬಹುದು. ಪಟ್ಟಿಯ ಜತೆಗೆ ಒದಗಿಸಲಾದ ಅಂತಿಮ ಕೀ ಉತ್ತರಗಳನ್ನೂ ಗಮನಿಸಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಹೇಳಿದ್ದಾರೆ.
Comments