ಹನಿಯೂರಿನ ಆಂಜನೇಯಸ್ವಾಮಿ ದೇವಾಲಯದಲ್ಲಿ ಅದ್ದೂರಿ ಹನುಮ ಜಯಂತಿ ಆಚರಣೆ...!!

 ಹನಿಯೂರಿನ ಆಂಜನೇಯಸ್ವಾಮಿ ದೇವಾಲಯದಲ್ಲಿ ಅದ್ದೂರಿ ಹನುಮ ಜಯಂತಿ ಆಚರಣೆ...!!



ಯಲಹಂಕ: ತಾಲೂಕಿನ ವಿವಿಧ ಆಂಜನೇಯ ಸ್ವಾಮಿ ದೇವಾಲಯಗಳಲ್ಲಿ ಹನುಮ ಜಯಂತಿಯನ್ನು ಶ್ರದ್ಧಾಭಕ್ತಿಗಳಿಂದ ಆಚರಿಸಲಾಯಿತು. ಇದರ ಅಂಗವಾಗಿ ವಿಶೇಷ ಅಲಂಕಾರ ಪೂಜಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.




ತಾಲೂಕಿನ ಹನಿಯೂರು ಗ್ರಾಮದ “ಆಂಜನೇಯ ಸ್ವಾಮಿ” ದೇವಾಲಯದಲ್ಲಿ ಪೂಜ್ಜೆ ಸಲ್ಲಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.



ದೇವಾಲಯದಲ್ಲಿ ಇಂದು ಮುಂಜಾನೆಯಿಂದಲೂ ಕೂಡ ಭಕ್ತರು ದೇವರ ದರ್ಶನ ಪಡೆಯಲು ಆಗಮಿಸಿದರು ಆಂಜನೇಯ ಸ್ವಾಮಿಯ ದರ್ಶನ ಪಡೆದು ದೇವರ ಕೃಪೆಗೆ ಭಕ್ತರು ಪಾತ್ರರಾದರು.






ಇಂದು ಹನುಮನ ಜಯಂತಿಯ ಪ್ರಯುಕ್ತ ವಿಶೇಷ ಅಲಂಕಾರ ಪೂಜಾ ಮಹಾ ಮಂಗಳಾರತಿ ನೆರವೇರಿಸಿ ತೀರ್ಥ ಪ್ರಸಾದ ವಿನಿಯೋಗ  ನಡೆಯಿತು.



ತಾಲೂಕಿನ ಹನಿಯೂರಿನ ಆಂಜನೇಯಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಅಂಗವಾಗಿ ಹೂವಿನ ಅಲಂಕಾರ ವಿಶೇಷ ಅಲಂಕಾರ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.






Comments