JDS ಮುಖಂಡ ಹಾಡೋನಹಳ್ಳಿ ಅಪ್ಪಯ್ಯಣ್ಣ ಇನ್ನಿಲ್ಲ..!
ಜೆಡಿಎಸ್ ಹಿರಿಯ ಮುಖಂಡ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಡೋನಹಳ್ಳಿ ಅಪ್ಪಯ್ಯಣ್ಣ (82) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮೃತರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು, ಓರ್ವ ಗಂಡು ಮಗನನ್ನು ಅಗಲಿದ್ದಾರೆ.
ಅಪ್ಯಯ್ಯಣ್ಣ ಅವರು ಹಾಡೋನಹಳ್ಳಿ ಗ್ರಾಪಂ ಅಧ್ಯಕ್ಷರಾಗಿ, ಬೆಂಗಳೂರು ಹಾಲು ಉತ್ಪಾಕರ ಸಹಕಾರ ಸಂಘದ ಮಾಜಿ ಅಧ್ಯಕ್ಷರು, ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ, ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
Comments