ಇಬ್ಬರು ಮಕ್ಕಳಿಗೆ ವಿಷವುಣಿಸಿ ದಂಪತಿ ಆತ್ಮಹತ್ಯೆ
ಬೆಂಗಳೂರು: ಇಬ್ಬರು ಮಕ್ಕಳಿಗೆ ವಿಷವುಣಿಸಿ ದಂಪತಿ ತಾವು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಸದಾಶಿವನಗರದ ಆರ್ ಎಂ ವಿ ಸೆಕೆಂಡ್ ಸ್ಟೇಜ್ ಟೆಂಪಲ್ ರಸ್ತೆಯ ಮನೆಯೊಂದರಲ್ಲಿ ನಡೆದಿದೆ.
ಅನುಪ್ ಕುಮಾರ್ (38), ಪತ್ನಿ ರಾಖಿ(35) ಆತ್ಮಹತ್ಯೆ ಮಾಡಿಕೊಂಡಿದ್ದು, 5 ವರ್ಷದ ವಿಶೇಷ ಚೇತನ ಹೆಣ್ಣುಮಗು ಮತ್ತು ಎರಡು ವರ್ಷದ ಗಂಡು ಮಗುವಿಗೆ ವಿಷ ಕುಡಿಸಿದ ಬಳಿಕ ದಂಪತಿ ಸಾವಿಗೆ ಶರಣಾಗಿದ್ದಾರೆ.
ದೊಡ್ಡಬಳ್ಳಾಪುರದ ಪ್ರಸಿದ್ಧ ಘಾಟಿ ದೇವಾಲಯದಲ್ಲಿ ವಿಜೃಂಭಣೆಯಿಂದ ನಡೆದ ಬ್ರಹ್ಮರಥೋತ್ಸವ
ಮೃತರು ಮೂಲತಃ ಉತ್ತರ ಪ್ರದೇಶದವರು ಎಂದು ತಿಳಿದು ಬಂದಿದೆ. ಇಬ್ಬರೂ ಟೆಕ್ಕಿಗಳಾಗಿದ್ದು, ವರ್ಕ್ ಫ್ರಂ ಹೋಮ್ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಸಾಲ ಬಾಧೆಯಿಂದ ನೊಂದು ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸದಾಶಿವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Comments