ಯಲಹಂಕ ವಿಶೇಷ ತಹಸೀಲ್ದಾ‌ರ್ ಲೋಕಾಯುಕ್ತ ಪೊಲೀಸರ ಬಲೆಗೆ..!!

ಯಲಹಂಕ ವಿಶೇಷ ತಹಸೀಲ್ದಾ‌ರ್ ಲೋಕಾಯುಕ್ತ ಪೊಲೀಸರ ಬಲೆಗೆ..!! 


ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲ್ಲೂಕು ತಹಸೀಲ್ದಾ‌ರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. 




ಯಲಹಂಕ ತಾಲೂಕಿನ ವಿಶೇಷ ತಹಸೀಲ್ದಾರ್ ಮುನಿಸ್ವಾಮಿ ರೆಡ್ಡಿ ಲೋಕಾಯುಕ್ತ ಪೊಲೀಸರು ನಡೆಸಿರುವ ಕಾರ್ಯಾಚರಣೆಯಲ್ಲಿ ಸಿಲುಕಿಕೊಂಡಿದ್ದಾರೆ. ಮುನಿಸ್ವಾಮಿರೆಡ್ಡಿ, ಯಲಹಂಕ ಸರಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕ ನಾಗರಾಜು ಹಾಗೂ ಸಂದೀಪ್‌ ಮೂವರು ಸೇರಿ ಪಹಣಿಯಲ್ಲಿ ಹೆಸರು ಬದಲಾಯಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ.


ಪಹಣಿಯಲ್ಲಿ ಹೆಸರು ಬದಲಾಯಿಸಲು 10 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದು, 2 ಲಕ್ಷ ಹಣ ಪಡೆಯುವಾಗ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.


 ವಕೀಲ ಮಹೇಶ್‌ ಎಂಬಾತ ನೀಡಿದ ದೂರಿನ ಆದಾರದ ಮೇಲೆ ಕಾರ್ಯಾಚರಣೆ ನಡೆದಿದ್ದು, ಎಸ್ಕೆಪ್ ಆಗಿರುವ ವಿಶೇಷ ತಹಸೀಲ್ದಾ‌ರ್ ಮುನಿಶಾಮಿರೆಡ್ಡಿಗಾಗಿ ಲೋಕಾಯುಕ್ತ ಪೊಲೀಸರು ಹುಡುಕಾಟ ನಡೆಸಿದ್ದಾರೆ. 



Comments