ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಚಿಕಿತ್ಸೆ ಫಲಿಸದೇ ಓರ್ವ ಸಾವು: ಇನ್ನಿಬ್ಬರಿಗೆ ಮುಂದುವರಿದ ಚಿಕಿತ್ಸೆ...!!
ತಾಲೂಕಿನ ಕತ್ತಿಹೊಸಹಳ್ಳಿ ಬಳಿ ಹಾದುಹೋಗಿರುವ ದಾಬಸ್ ಪೇಟೆ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿರುವ ಘಟನೆ ಇಂದು ಮುಂಜಾನೆ ಸುಮಾರು 5:30ರ ವೇಳೆಯಲ್ಲಿ ನಡೆದಿತ್ತು. ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದವು, ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಓರ್ವ ಅಸುನೀಗಿದ್ದು, ಮತ್ತಿಬ್ಬರಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರ ಮೂಲದ ಐವರು ಸ್ನೇಹಿತ ಮದುವೆ ಗದದಕ್ಕೆ ಹೋಗಿ ವಾಪಸ್ ಮನೆಗೆ ಬರುವ ವೇಳೆ ಈ ಘಟನೆ ನಡೆದಿದೆ.
ಮಹಮದ್ ಯೂನಿಸ್ (20), ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಯುವಕ ಎಂದು ಮೂಲಗಳು ತಿಳಿಸಿವೆ.
ಕಿಶೋರ್ ಮತ್ತು ಯತೀಶ್ ಎಂಬ ಗಾಯಗಳುಗಳಿಗೆ ಚಿಕಿತ್ಸೆ ಮುಂದುವರಿದಿದೆ. ಚೇತನ್ ಮತ್ತು ವಿಶಾಲ್ ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.
ಪಲ್ಟಿ ಹಿನ್ನೆಲೆ ಕಾರು ಸಂಪೂರ್ಣ ಜಖಂಗೊಂಡಿದ್ದು,
ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
Comments