ಸಾರ್ವಜನಿಕರಿಂದ ಆಕ್ರೋಶ nammametro ದರ ಸ್ಟೇಜ್ ಆಧಾರದಲ್ಲಿ ಇಳಿಕೆ

 ಸಾರ್ವಜನಿಕರಿಂದ ಆಕ್ರೋಶ nammametro ದರ ಸ್ಟೇಜ್ ಆಧಾರದಲ್ಲಿ ಇಳಿಕೆ...


ನಮ್ಮ ಮೆಟ್ರೋ ಪ್ರಯಾಣ ದರ ದುಪ್ಪಟ್ಟು ಏರಿಕೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಎಚ್ಚೆತ್ತ ಬಿಎಂಆರ್ಸಿಎಲ್ ಸ್ಟೇಜ್ ಆಧಾರದಲ್ಲಿ ಇಳಿಕೆ ಮಾಡಲು ಮುಂದಾಗಿದೆ.


 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಟ್ರೋ ಪ್ರಯಾಣ ದರ ಪರಿಷ್ಕರಿಸುವಂತೆ ಬಿಎಂಆರ್ಸಿಎಲ್ ಗೆ ಇಂದು ಸಲಹೆ ನೀಡಿದ್ದರು. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ ಬಿಎಂಆರ್ ಸಿಎಲ್ ಎಂಡಿ ಮಹೇಶ್ವರ್ ರಾವ್, ಕನಿಷ್ಠ 10 ರೂ. ಹಾಗೂ ಗರಿಷ್ಠ 90 ರೂಪಾಯಿ ಏರಿಕೆ ಹಾಗೇ ಇರುತ್ತದೆ. 


ನಮ್ಮ ಮೆಟ್ರೋ ಪ್ರಯಾಣ ದರ ಸ್ಟೇಜ್ ಆಧಾರದಲ್ಲಿ ಇಳಿಕೆ ಮಾಡಲಾಗುವುದು. ಮೆಟ್ರೋ ದರ ಶೇ. 90ರಿಂದ ಶೇ 100ರವರೆಗೆ ಹೆಚ್ಚಳವಾಗಿರುವ ನಿಲ್ದಾಣಗಳ ಮಧ್ಯೆ ಇಳಿಕೆ ಮಾಡಲಾಗುವುದು. ಶೇ. 60ರಷ್ಟು ದರ ಹೆಚ್ಚಳವಾಗಿರುವಲ್ಲಿ ಸ್ಲ್ಯಾಬ್ ಮರ್ಜ್ ಮಾಡುತ್ತೇವೆ. ಪರಿಷ್ಕೃತ ದರ ನಾಳೆಯಿಂದಲೇ ಜಾರಿಗೆ ಬರಲಿದೆ ಎಂದು ತಿಳಿಸಿದರು.

Comments