Doddaballapura ಹಿಟ್ ಅಂಡ್ ರನ್ ಪ್ರಕರಣ; ಬೈಕ್ ಸವಾರ ಸ್ಥಳದಲ್ಲೇ ಸಾವು....!!
Doddaballapura : ಅಪರಿಚಿತ ಕ್ಯಾಂಟರ್ ಡಿಕ್ಕಿ ಹೊಡೆತ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ..
ದೊಡ್ಡಬಳ್ಳಾಪುರದ ವಿದ್ಯಾನಗರ ನಿವಾಸಿ ಚನ್ನಕೇಶವ ಎಂಬ 55 ವರ್ಷದ ದ್ವಿಚಕ್ರ ವಾಹನ ಸವಾರ ರಾಷ್ಟ್ರೀಯ ಹೆದ್ದಾರಿಯ ಆಲಹಳ್ಳಿ ಫ್ಲೈಓವರ್ ಬಳಿ ಅಪರಿಚಿತ ಕ್ಯಾಂಟರ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರು ಕೆಸಿಪಿ(kcp) ವೃತ್ತದಿಂದ ಮನೆಗೆ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ದೇವನಹಳ್ಳಿ ಕಡೆಯಿಂದ ಬರುತ್ತಿದ್ದ ಕ್ಯಾಂಟರ್ ನೊಂದಿಗೆ ಸ್ಥಳದಿಂದ ಪರಾರಿಯಾಗಿದೆ.
ಮೃತರ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕುಟುಂಬಸ್ಥರ ನೋವು ಮುಗಿಲು ಮುಟ್ಟಿದೆ.
ಘಟನೆ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments